ಉಪ್ಪಳ: ಶ್ರೀ ಭಗವತೀ ಕ್ಷೇತ್ರದಲ್ಲಿ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ
ಉಪ್ಪಳದ ಶ್ರೀ ಭಗವತೀ ಕ್ಷೇತ್ರದಲ್ಲಿ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಿತು.
ಉಪ್ಪಳದ ಶ್ರೀ ಭಗವತೀ ಕ್ಷೇತ್ರ ಪುನರ್ ನಿರ್ಮಾಣಗೊಳ್ಳುತ್ತಿದೆ. ಶ್ರೀ ದೇವಳ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ ನೆರವೇರಿತು. ನಂತರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮುಂಬೈ ಉದ್ಯಮಿ ಹೇರಂಭ ಇಂಡಸ್ಟ್ರೀಸ್‍ನ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಅವರು ಶಿಲಾಫಲಕ ಅನಾವರಣಗೊಳಿಸಿದರು. ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ತಂತ್ರಿವರ್ಯರಾದ ಬೂಡುಮನೆ ನಾರಾಯಣ ಪದಕಣ್ಣಾಯರು, ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ನಿಲೇಶ್ವರ ಪದ್ಮನಾಭ ತಂತ್ರಿಗಳು ಅನುಗ್ರಹ ಸಂದೇಶವನ್ನು ನೀಡಿದರು.
ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಹೆಗ್ಡೆ ಅವರು ಸಭಾ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಅಡ್ಕ ಶ್ರೀ ಭಗವತಿ ಕ್ಷೇತ್ರದ ಶ್ರೀ ಕೃಷ್ಣ ಕಾರ್ನವರು, ಗ್ರಾಮ ಚಾವಡಿಯ ಶಿರಿಯ, ಉದ್ಯಮಿ ಶಶಿಧರ್ ಶೆಟ್ಟಿ, ಮುಳಿಂಜ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಹರಿನಾಥ್ ಭಂಡಾರಿ, ಮುಂಬೈ ಉದ್ಯಮಿ ಭುಜಂಗ ಶೆಟ್ಟಿ ಕೊಂಡೆವೂರು, ಮಂಗಳೂರಿನ ಹಾರ್ಟ್ ಸ್ಕ್ಯಾನ್ ಫೌಂಡೇಶನ್‍ನ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಕೆ. ಮುಕುಂದ್, ಉತ್ತರ ಮಲಬಾರ್ ತೀಯಾ ಕ್ಷೇತ್ರದ ಅಧ್ಯಕ್ಷರಾದ ರಾಜನ್ ಪೆರಿಯ, ಕಾಸರಗೋಡು ಉದ್ಯಮಿ ಜನಾರ್ದನ್ ಕೆ. ಕಣ್ಣನ್, ಡಾ. ಕೌಶಿಕ್ ಮಂಗಲ್ಪಾಡಿ, ಕಿರಣ್ ಆಳ್ವ ಪಟ್ಟತ್ತಮೊಗರು, ಉದ್ಯಮಿಗಳಾದ ಶ್ರೀನಿವಾಸ, ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.