ಪುತ್ತೂರು: ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ

ಪುತ್ತೂರು: ರಾಮ ರಾಜ್ಯದ ನಿರ್ಮಾಣದ ಭಾಗವಾಗಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠೆಯಾಗುತ್ತಿದೆ. ರಾಮ ಹಾಗೂ ರಾಮ ರಾಜ್ಯದ ಪ್ರತಿಷ್ಠೆಯನ್ನು ಹಳ್ಳಿ ಹಳ್ಳಿಯಲ್ಲಿ ಸಂಭ್ರಮ ಪಡಬೇಕು. ಶ್ರೀ ರಾಮನ ಪ್ರತಿಷ್ಠೆಯಿಂದ ಮನುಷ್ಯ ಮಾತ್ರವಲ್ಲದೆ ಪ್ರತಿ ಜೀವ ಸಂಕುಲಗಳಿಗೂ ಆನಂದ ಉಂಟಾಗಲಿದೆ. ಇದರಿಂದ ಜಗತ್ತಿಗೇ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.ಅವರು ಪುತ್ತೂರಿನ ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವೈಭವದ ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರು ಎಂ.ಆರ್. ಜಿ. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್,ಅದಾನಿ ಗ್ರೂಪ್ ಕರ್ನಾಟಕದ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕ ಕಿಶೋರ್ ಅಳ್ವ, ಬೆಂಗಳೂರಿನ ಉದ್ಯಮಿ ಕಿರಣಚಂದ್ರ ಡಿ. ಮೊದಲಾದವರು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.