ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ರಾಜ್ಯದ ಸುಮಾರು 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಗೆ ಹಾಜರಾಗಿದ್ದ 7,70,209 ವಿದ್ಯಾರ್ಥಿಗಳ ಪೈಕಿ, 7,24,794 ಮಂದಿ ಉತ್ತೀರ್ಣರಾಗಿದ್ದಾರೆ. ಶೇ 94.1ರಷ್ಟು ಫಲಿತಾಂಶ ಬಂದಿದೆ ಎಂದು ತಿಳಿಸಿದೆ. ದಕ್ಷಿಣ ಕನ್ನಡ ಪ್ರಥಮಮ ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.
