ಎಸ್ ಎಸ್ ಎಲ್ಸಿ ಪರೀಕ್ಷೆ : ಕಲ್ಲಬೆಟ್ಟು ಮೊರಾಜಿ೯ ದೇಸಾಯಿಗೆ ಶೇ 100 ಫಲಿತಾಂಶ

ಮೂಡುಬಿದಿರೆ : ದ. ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿಶಾಲೆಯ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 43 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸತತವಾಗಿ ಶಾಲೆಗೆ ಶೇ. 100 ಫಲಿತಾಂಶವನ್ನು ನೀಡಿರುತ್ತಾರೆ.

43 ವಿದ್ಯಾರ್ಥಿಗಳಲ್ಲಿ 25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 01 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಗುಣಮಟ್ಟದ ಫಲಿತಾಂಶವನ್ನು ತಂದಿರುತ್ತಾರೆ.
ಲಕ್ಕವ್ವ ಶೇ. 99.04% ( 619) ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಚೈತ್ರಾ ಪಾಟಿಲ್ ಶೇ. 98.72% (617) ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸವಿತಾ.ಡಿ ಶೇ. 96.96% (606) ಅಂಕ ಗಳಿಸಿ ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ. ಅದೇ ರೀತಿ ಸಹನಾ.ಎಮ್, ರೂಪಾ, ಸವಿತಾ.ಕೆ ಒಟ್ಟು 06 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಮಂಗಳೂರು, ದ.ಕ. ಶಾಲೆಯ ಪ್ರಾಚಾರ್ಯರು ಹಾಗೂ ಶಾಲೆಯ ಪಾಲಕ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Related Posts

Leave a Reply

Your email address will not be published.