ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26 ನೇ ಸಾಲಿನ ಮಂತ್ರಿ ಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮವು ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜ್ ಕಡಬ, ಇಲ್ಲಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ವಾಸುದೇವ ಗೌಡ. ಕೆ ಇವರು ಪ್ರಜೆಗಳೇ ಪ್ರಭುಗಳಾಗುವ ಈ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ದೃಷ್ಟಿಯಲ್ಲಿ ಹಾಗೂ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ಶಾಲೆಗಳಲ್ಲಿ ಶಾಲಾ ಸಂಸತ್ ರಚನೆ ಮತ್ತು ಮತದಾನದ ಚುನಾವಣೆಯನ್ನು ನಡೆಸಲಾಗುತ್ತದೆ. ಶಾಲಾ ಸಂಸತ್ ರಚನೆಯ ಮುಖ್ಯ ಉದ್ದೇಶ ಮಕ್ಕಳಲ್ಲಿ ಈಗಿನಿಂದಲೇ ಸಂಸದೀಯ ವ್ಯವಸ್ಥೆಯ ಬಗ್ಗೆ ತಿಳುವಳಿಕೆ ನೀಡುವುದು ಎಂದು ಹೇಳಿದರು.
ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜ ವಹಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಶಾಲಾ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಯುತ ಗಿರಿಧರ್ ರೈ ,ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ದಕ್ಷ ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಶಿಕ್ಷಕಿ ಫಿಲೋಮಿನಾ ಸ್ವಾಗತಿಸಿ , ಝಬೈದ ವಂದಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಮಾನಸ ನಿರೂಪಿಸಿದರು.
