ಪುತ್ತೂರಿನಲ್ಲಿ ಎಸ್‍ಟಿ ಮೋರ್ಚಾದ ಜಿಲ್ಲಾ ಸಮಾವೇಶ

ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಸಾಮಾಜಿಕ ನ್ಯಾಯ ನೀಡಲು ಪೂರಕವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸವಲತ್ತುಗಳು ಸಿಗಬೇಕು ಎಂಬ ಸಿದ್ಧಾಂತದ ಪ್ರತಿಪಾದನೆಯೊಂದಿಗೆ ಬಿಜೆಪಿ ಆಡಳಿತ ನಡೆಸುತ್ತಿದ್ದು, ಸಂಕಲ್ಪವನ್ನು ಆಡಳಿತದಲ್ಲಿ ಅನುಷ್ಠಾನ ಮಾಡಿದೆ ಎಂದ ಅವರು, ಎಸ್‍ಟಿ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ದೃಷ್ಟಿಯಿಂದ ಎಸ್ಟಿ ಸಮಾಜದ ಮೀಸಲಾತಿಯನ್ನು ಮೂರು ಶೇ.ದಿಂದ 7 ಶೇ. ಕ್ಕೆ ಏರಿಸಿದೆ, 75 ಯೂನಿಟ್ ಉಚಿತ್ ವಿದ್ಯುತ್ ನೀಡಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮುಖ್ಯ ಭಾಷಣ ಮಾಡಿ, ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ 150 ಕ್ಕೂ ಹೆಚ್ಚು ಶಾಸಕರೊಂದಿಗೆ ಅಧಿಕಾರ ವಹಿಸಿ ಇತಿಹಾಸ ನಿರ್ಮಿಸಲಿದೆ. ಅಲ್ಲದೆ ದ.ಕ.ಜಿಲ್ಲೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರದ ಪೈಕಿ ಎಂಟು ಕ್ಷೇತ್ರದಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಈಶಾನ್ಯ ರಾಜ್ಯದ ಚುನಾವಣೆಯಿಂದ ಈ ವಿಶ್ವಾಸ ಬಂದಿದೆ ಎಂದರು.ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರುಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚೆನ್ನಕೇಶವ, ಪುತ್ತೂರು ಶಾಸಕ ಸಂಜೀವ ಮಠಂದೂರು,ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಅಮೈ ಮಹಾಲಿಂಗ ನಾಯ್ಕ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ ಬಂಟ್ವಾಳ, ಕಸ್ತೂರಿ ಪಂಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.