ಡಿ. 22 ಉಡುಪಿಯಲ್ಲಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ
ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ ಡಿಸೆಂಬರ್ 22 ರಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 14-12-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಉಡುಪಿ ನಗರ ಸಭೆಯ ಪೌರಾಯುಕ್ತದಾರ ಮಹಾಂತೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಾರುತಿ ಹಾಗೂ ಕಾಲೇಜು ಪ್ರಾಂಶುಪಾಲರು ಉಪಸ್ಥಿತರಿದ್ದರು.


















