ಮೂಡುಬಿದಿರೆ: ನಿಮೋನಿಯಾಕ್ಕೆ ವಿದ್ಯಾರ್ಥಿನಿ ಬಲಿ
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಅಶ್ರಿಜಾ ನಿಮೋನಿಯಾಕ್ಕೆ ತುತ್ತಾಗಿ ಮೃತಪಟ್ಟಿದ್ದಾಳೆ.
ಬೆಳ್ತಂಗಡಿ ತಾಲೂಕಿನ ನಿವಾಸಿ ಮರೋಡಿ ನಿವಾಸಿಗಳಾದ ಜಯಾನಂದ ರಾಜಶ್ರೀ ದಂಪತಿಯ ಪುತ್ರಿಯಾಗಿರುವ ಈಕೆ ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.
ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ.