HomeFresh Newsಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃ*ತ್ಯು

ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃ*ತ್ಯು

ಮಂಗಳೂರಿನ ಎಮ್ಮೆಕೆರೆ ಕ್ರಾಸ್‌ನ ರಾಮಲಕ್ಷ್ಮೀ ನಾರಾಯಣ ಕನ್ವೆನ್ಶನ್ ಹಾಲ್‌ನಲ್ಲಿ ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಹಳೆಯಂಗಡಿ ನಿವಾಸಿ ಮಹಮ್ಮದ್ ಇಲಿಯಾಸ್ ಮೊಯಿದಿನಬ್ಬ ಅವರ ಪುತ್ರ ಮಹಮ್ಮದ್ ಶಮಾಜ್ (೧೬) ಮೃತ ವಿದ್ಯಾರ್ಥಿ. ಶನಿವಾರ ಸರ್ವ ಕಾಲೇಜು ವಿದ್ಯಾರ್ಥಿಗಳ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿತ್ತು. ಸಭಾಂಗಣದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಮೊದಲ ಮಹಡಿಯ ಪ್ಯಾಸೇಜ್‌ನ ತಡೆಗೋಡೆಗೆ ಹಲವರು ಒರಗಿ ನಿಂತಿದ್ದರು. ಈ ವೇಳೆ ಏಕಾಏಕಿ ತಡೆಗೋಡೆ ಕುಸಿದು ಬಿದ್ದಿದೆ. ತಡೆಗೋಡೆ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಆಯತಪ್ಪಿ ಕೆಳಗೆ ಬಿದ್ದಿದ್ದು, ಕೆಳಗೆ ನಿಂತಿದ್ದ ಮತ್ತೊಬ್ಬ ವಿದ್ಯಾರ್ಥಿಯ ಮೇಲೂ ತಡೆಗೋಡೆ ಬಿದ್ದಿದೆ. ಘಟನೆಯಲ್ಲಿ ಒಟ್ಟು ಐವರು ಗಾಯಗೊಂಡಿದ್ದರು.

ಗಾಯಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಶಮಾಜ್ ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮಹಮ್ಮದ್ ಶನಾನ್ ಅಹಮ್ಮದ್ (೧೮), ಹನೀಫ್ (೨೩) ಹಾಗೂ ದಾವೂದ್ ಫರ್ಸಿನ್ ಅಹಮ್ಮದ್ (೧೮) ಗಾಯಗೊಂಡಿದ್ದಾರೆ.ಘಟನೆ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments