ಸು ಫ್ರಮ್ ಸೋ’ ಚಿತ್ರವನ್ನು ನಿರ್ದೇಶಿಸಿ ದದ್ದು ಮಾಡಿದ್ದ ನಟ ಜೆ.ಪಿ.ತುಮಿನಾಡ್ ಅವರು ಬುಧವಾರ(ಮೇ6) ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಮಂಗಳೂರಿನ ಪಿಲಿಕುಲದಲ್ಲಿರುವ ಸ್ಕೌಟ್ ಭವನದಲ್ಲಿ ರಶ್ಮಿಕಾ ಅವರೊಂದಿಗೆ ಜೆ.ಪಿ.ತುಮಿನಾಡ್ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.ನಿರೂಪಕ ನಿರಂಜನ್ ದೇಶಪಾಂಡೆ, ನಟಿ ಸಂಧ್ಯಾ ಅರಕೆರೆ, ನಿರ್ದೇಶಕ ಶ್ರೀನಿಧಿ ಸೇರಿದಂತೆ ಅನೇಕರು ವಿವಾಹ ಸಂಭ್ರಮದಲ್ಲಿ ಭಾಗಿಯಾಗಿ ನವ ದಂಪತಿಗೆ ಶುಭ ಹಾರೈಸಿದ್ದಾರೆ.
ಕರಾವಳಿ ಮೂಲದ ನಟರಾದ ಜಯ ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ನಟ, ನಿರ್ದೇಶಕ ಹಾಗೂ ಬರಹಗಾರರಾಗಿ ಕೆಲ ಮಾಡುತ್ತಿದ್ದಾರೆ. 2025 ರಲ್ಲಿ ತಮ್ಮ ಮೊದಲ ನಿರ್ದೇಶನದಲ್ಲಿ ಮೂಡಿ ಬಂದ ‘ಸು ಫ್ರಂ ಸೋ’ ಚಿತ್ರದ ಮೂಲಕ ಖ್ಯಾತಿ ಗಳಿಸಿದರು. ಮಾತ್ರವಲ್ಲದೆ, ಇದೇ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.
ಇದಕ್ಕೂ ಮೊದಲು ಜೆ.ಪಿ.ತೂಮಿನಾಡು ಅವರು ‘ಸಪ್ತ ಸಾಗರದಾಚೆ ಎಲ್ಲೋ’, ಸೈಡ್ ಬಿ, ‘ಸ್ವಾತಿ ಮುತ್ತಿನ ಮಳೆ ಹನಿಯೇ’, ‘ಕಥಾಸಂಗಮ’ ಹಾಗೂ ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಇವರು ‘ಮಜಾ ಭಾರತ’ ಕಾಮಿಡಿ ರಿಯಾಲಿಟಿ ಶೋನಲ್ಲಿಯೂ ಕಾಣಿಸಿಕೊಂಡಿದ್ದರು.
ರಾಜ್ ಬಿ. ಶೆಟ್ಟಿ ಅವರ ನಿರ್ದೇಶನದಲ್ಲಿ ಮೂಡಿಬಂದ ‘ಒಂದು ಮೊಟ್ಟೆಯ ಕಥೆ’ ಸಿನಿಮಾದಲ್ಲಿ ಸಣ್ಣದೊಂದು ಪಾತ್ರ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.
