ಸುಬ್ರಹ್ಮಣ್ಯ : ಕೆ.ಎಸ್.ಎಸ್. ಕಾಲೇಜಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ,ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ,ರೋವರ್ಸ್ ಅಂಡ್ ರೆಂಜರ್ಸ್ ಘಟಕ ,ಯೂತ್ ರೆಡ್ ಕ್ರಾಸ್ ಘಟಕ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶ ಗಳ ಜಂಟಿ ಆಶಯದಲ್ಲಿ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.


ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ ವೈದ್ಯಾಧಿಕಾರಿ ಡಾ. ಸೀತಾರಾಮ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲ ದಿನೇಶ್ .ಕೆ ವಹಿಸಿದ್ದರು . ಮುಖ್ಯ ಅತಿಥಿ ಯಾಗಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್, ಉಪಸ್ಥಿತರಿದ್ದರು . ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ಆಗಮಿಸಿದ್ದರು. ವೇದಿಕೆಯಲ್ಲಿ ವಿವಿಧ ಘಟಕಗಳ ಅಧಿಕಾರಿಗಳು ಹಾಗೂ ಉಪನ್ಯಾಸಕರುಗಳಾದ ಮನೋಹರ್ ,ಸೃಜನ್ ಮುಂಡೋಡಿ , ಲತಾ ಬಿಟಿ ,ಆರತಿ, ಪ್ರಮೀಳ ,ರಾಮಪ್ರಸಾದ್, ಸ್ವಾತಿ, ವನಿತ, ಹಾಗೂ ಅಶ್ವಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ದೀಕ್ಷಾ ನಿರುಪಿಸಿದ ಕಾರ್ಯಕ್ರಮ ದಲ್ಲಿ ರಾಮಪ್ರಸಾದ್ ಸ್ವಾಗತಿಸಿ, ಕೊನೆಯಲ್ಲಿ ಸೃಜನ್ ಮಂಡೋಡಿ ವಂದಿಸಿದರು.
