ಸುಬ್ರಹ್ಮಣ್ಯ: ಕುಕ್ಕೆ ದೇವಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ
ಸುಬ್ರಹ್ಮಣ್ಯ: ರಾಜ್ಯ ಸರಕಾರದ ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಭೇಟಿ ನೀಡಿದರು.ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ದೇವಳದ ಅರ್ಚಕ ರಮೇಶ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಸ್ವೀಕರಿಸಿದರು.
ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ಶ್ರೀ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು.
ಬಳಿಕ ಆಡಳಿತ ಕಚೇರಿಗೆ ಭೇಟಿ ನೀಡಿದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ ಎಸ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು, ವನಜಾ.ಬಿ.ಭಟ್,ಲೋಕೇಶ್ ಮುಂಡೋಕಜೆ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಅಚ್ಚುತ್ತ ಬಳ್ಪ, ಪ್ರಮುಖರಾದ ಕೃಷ್ಣಪ್ಪ, ರಕ್ಷಿತ್ ಶಿವರಾಂ, ಸುಧೀರ್ ಶೆಟ್ಟಿ, ಪಿ.ಸಿ.ಜಯಾಂ,
ಅಶೋಕ್ ನೆಕ್ರಾಜೆ, ನಿತ್ಯಾನಂದ ಮುಂಡೋಡಿ,
ಭರತ್ ಮುಂಡೋಡಿ, ಹರೀಶ್ ಇಂಜಾಡಿ, ವಿಮಲಾ ರಂಗಯ್ಯ, ಕೃಷ್ಣಮೂರ್ತಿ ಭಟ್, ಎ.ಸುಬ್ರಹ್ಮಣ್ಯ ರಾವ್,ಅರಣ್ಯ ಇಲಾಖೆಯ ಡಿಸಿಎಫ್ ಅಂತೋಣಿ ಮರಿಯಪ್ಪ, ಸಿಸಿಎಫ್ ಕರಿಕಾಲನ್, ಎಸಿಎಫ್ ಪ್ರವೀಣ್ ಶೆಟ್ಟಿ, ಆರ್ ಎಫ್ ಓ ಮಂಜುನಾಥ್ ಎನ್ ಸೇರಿದಂತೆ ಇಲಾಖಾಧಿಕಾರಿಗಳು ಸಿಬ್ಬಂಧಿಗಳು ಉಪಸ್ಥಿತರಿದ್ದರು.