Subramanya : ಭಾರೀ ಮಳೆಗೆ ಮುಳುಗಡೆಯಾದ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಕುಮಾರ ಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುರಿಂದ ಪವಿತ್ರ ಸ್ನಾನ ಘಟ್ಟ ಮುಳುಗಡೆಯಾಗಿದೆ.ಹೀಗಾಗಿ ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ.

ಕಳೆದ ಕೆಲವು ದಿನಗಳಿಂದ ದ.ಕ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ.ಈಗಾಗ್ಲೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮಳೆಯಬ್ಬರ ಮುಂದುವರಿದಿದೆ.ಈ ಹಿನ್ನಲೆಯಲ್ಲಿ ಕಳೆದೆರಡು ದಿನಗಳಿಂದ ಶಾಲಾ ಕಾಲೇಜುಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಲಾಗಿತ್ತು.ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ಸಾರ್ವಜನಿಕರು ಎಚ್ಚರವಾಗಿರುವಂತೆಯೂ ಇಲಾಖೆ ಸೂಚನೆಯನ್ನು ನೀಡಿದೆ.

Related Posts

Leave a Reply

Your email address will not be published.