ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ -2024ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ದಸರಾ ಉತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು.

ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಲಿದ್ದು, ಈ ಬಾರಿ ಮಕ್ಕಳ ಮತ್ತು ಮಹಿಳಾ ದಸರಾ ಕಾರ್ಯಕ್ರಮವು ಮೆರಗು ನೀಡಲಿದೆ.ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಕೋಶಾಧಿಕಾರಿ ಅಶೋಕ್ ಪ್ರಭು ಜೊತೆ ಕಾರ್ಯದರ್ಶಿ ಅನಿಲ್ ಕುಮಾರ್ ಕೆ.ಸಿ., ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಕಾರ್ಯದರ್ಶಿ ಎಂ.ಕೆ. ಸತೀಶ್, ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಕೋಶಾಧಿಕಾರಿ ಗಣೇಶ್ ಆಳ್ವ, ಗೌರವ ಸಲಹೆಗಾರರುಗಳಾದ ಎನ್. ಜಯಪ್ರಕಾಶ್ ರೈ, ಎನ್.ಎ. ರಾಮಚಂದ್ರ, ಶ್ರೀ ಶಾರದಾಂಬ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ದಸರಾ ಉತ್ಸವ ಸಮಿತಿ ಖಜಾಂಜಿ ಸುನಿಲ್ ಕುಮಾರ್ ಕೇರ್ಪಳ ಸೇರಿದಂತೆ ಶ್ರೀ ಶಾರದಾಂಬ ಸೇವಾ ಸಮಿತಿಯ ಉಪಾಧ್ಯಕ್ಷರುಗಳು, ದಸರಾ ಉತ್ಸವ ಸಮಿತಿ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ದಸರಾ ವಾರ್ಡ್ ಸಮಿತಿಯ ಪದಾಧಿಕಾರಿಗಳು, ಉಪ ಸಮಿತಿಯ ಪದಾಧಿಕಾರಿಗಳು ಹಾಗೂ ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.