HomeFresh Newsಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ. ಜನರ ಬಳಿಗೆ ಸರಕಾರವೇ ತೆರಳಿ ಸಮಸ್ಯೆ ಪರಿಹಾರ ಮಾಡುವುದು ಜನತಾ ದರ್ಶನದ ಉದ್ದೇಶ. ಸರಕಾರ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಈ ವರ್ಷ 38 ಸಾವಿರ ಕೋಟಿ, ಮುಂದಿನ ವರ್ಷ 58 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ನೇರವಾಗಿ ನೀಡುತ್ತೇವೆ ಎಂದರು.

ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಡಿಎಫ್‌ಒ ಅಂಥೋನಿ ಮರಿಯಪ್ಪ, ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ, ತಹಶೀಲ್ದಾರ್ ಜಿ.ಮಂಜುನಾಥ್, ವಿವಿಧ ಇಲಾಖೆಗಳ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments