HomeFresh Newsಸುಳ್ಯ:ಮನೆಗೆ ನುಗ್ಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ವಶಕ್ಕೆ

ಸುಳ್ಯ:ಮನೆಗೆ ನುಗ್ಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ವಶಕ್ಕೆ

ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ವಾಸವಾಗಿರುವ ಪುನೀತ್ ಎಂಬ ಯುವಕನ ಮೇಲೆ ರಾತ್ರಿ ಯುವಕರ ತಂಡವೊಂದು ತಲ್ವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ. ರಾತ್ರಿ ಗಂಟೆ 9.30 ರ ವೇಳೆಗೆ ಆರಂಬೂರಿನಲ್ಲಿರುವ ಮನೆಗೆ ನಾಲ್ವರು ಯುವಕರು ಬೈಕಿನಲ್ಲಿ ಏಕಾಏಕಿಯಾಗಿ ಬಂದು ತಲ್ವಾರು ಮತ್ತು ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ.

ತಲೆಯ ಭಾಗಕ್ಕೆ ಏಟಾಗಿದ್ದು ಪುನೀತ್ ರವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸುಳ್ಯ ಪೊಲೀಸರಿಗೆ ಈ ಕುರಿತು ದೂರು ದಾಖಲಿಸಲಾಗಿದ್ದು ಓರ್ವ ಆರೋಪಿತ ಮನೋಜ್ ಎಂಬಾತನ ಜೊತೆಗೆ ಬೈಕ್ ಸಹಿತ ಪೋಲಿಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.ತಲೆಯ ಭಾಗಕ್ಕೆ ಏಟಾಗಿದ್ದು ಪುನೀತ್ ರವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸುಳ್ಯ ಪೊಲೀಸರಿಗೆ ಈ ಕುರಿತು ದೂರು ದಾಖಲಿಸಲಾಗಿದ್ದು ಓರ್ವ ಆರೋಪಿತ ಮನೋಜ್ ಎಂಬಾತನ ಜೊತೆಗೆ ಬೈಕ್ ಸಹಿತ ಪೋಲಿಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

add - S.L Shet ..march 2025
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments