HomeFresh Newsಪೇರಾಲು: ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದಲ್ಲಿ ನಡೆದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಪೇರಾಲು: ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದಲ್ಲಿ ನಡೆದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ವಿಕ ವಿಧಿ ವಿಧಾನಗಳು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ನಡೆಯಿತು.

ನಂತರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ವೇದಮೂರ್ತಿ ಬ್ರಹ್ಮಶ್ರೀ. ಕುಂಟಾರು ರವೀಶ ತಂತ್ರಿಗಳು ಧಾರ್ಮಿಕ ಉಪನ್ಯಾಸವನ್ನು ನೀಡಿದರು.. ಎಲ್ಲರೂ ಒಗ್ಗಟ್ಟಾಗಿ ಇದ್ದರೆ, ಗ್ರಾಮಗಳು ಮತ್ತು ಊರಿನ ಜನರು ಸುಭೀಕ್ಷೆಯಾಗಲು ಸಾಧ್ಯ ಅಂಬ್ರೋಟಿ ಹದಿನಾರು ಸಮಸ್ತರ ಒಗ್ಗೂಡುವಿಕೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಜಯರಾಜ್ ಕುಕ್ಕೆಟ್ಟಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಕೆದ್ಕಾರು, ಊರ ಗೌಡರಾದ ಕುಕ್ಕೆಟ್ಟಿ ಲಕ್ಷ್ಮಣ ಗೌಡ, ಕಾರ್ಯಾಧ್ಯಕ್ಷರಾದ ಬಾಲಚಂದ್ರ ಕುಕ್ಕೆಟ್ಟಿ, ಕೋಶಾಧಿಕಾರಿ ಶಿವರಾಮ ಗೌಡ ಆಳಂಕಲ್ಯ, ಉಪಾಧ್ಯಕ್ಷರಾದ ಸುರೇಶ್ ಚೌಟಾಜೆ, ಲಿಂಗಪ್ಪ ಗೌಡ ಬದಿಕಾನ, ದೇವರಾಜ ಸಂಕೇಶ, ಸಂಚಾಲಕರಾದ ವಾಸುದೇವ ಬತ್ಲಿಮನೆ, ಕಾರ್ಯದರ್ಶಿಗಳಾದ ಕುಶಾಲಪ್ಪ ಕೆಮ್ಮಾರ, ಅಜಿತ್ ಬನ್ನೂರು, ಅಂಬ್ರೋಟಿ ಹದಿನಾರು ಸಮಸ್ತರು, ಪದಾಧಿಕಾರಿಗಳು, ಸದಸ್ಯರು ಮತ್ತು ಬೈಲುವಾರು ಸಂಚಾಲಕರು, ಜೀರ್ಣೋದ್ಧಾರ ಸಮಿತಿಯವರು ಮತ್ತಿತರರು ಉಪಸ್ಥಿತರಿದ್ದರು.

.

ಈ‌ ದಿನ ರಾತ್ರಿ‌ ಸಮರ್ಥ ಸಾಂಸ್ಕೃತಿಕ ಕಲಾ‌ತಂಡ‌ ಈಶ್ವರ ಮಂಗಲ ಇವರಿಂದ ನೃತ್ಯ ವೈಭವ ನಡೆಯಲಿದೆ.‌ ರಾತ್ರಿ 8 ಗಂಟೆಗೆ ಗಯಾಪದ ಕಲಾವಿದೆರ್ ಉಬಾರ್ ತಂಡದಿಂದ ನಾಗಮಾಣಿಕ್ಯ ಚಾರಿತ್ರಿಕ ನಾಟಕ ಪ್ರದರ್ಶನಗೊಳ್ಳಲಿದೆ.

.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments