HomeFresh Newsಸುಳ್ಯ: ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕೇಂದ್ರದ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಸುಳ್ಯ: ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕೇಂದ್ರದ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಿಚಾರ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಂಜ ವಲಯದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು. ಸದ್ರಿ ಕಾರ್ಯಕ್ರಮವನ್ನು ಡಾ|| ದೇವಿಪ್ರಸಾದ್ ಕಾನತ್ತೂರು, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಇವರು ಉದ್ಘಾಟಿಸಿ ಶುಭ ಹಾರೈಸಿದರು.

ಸದ್ರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನಳಿನಿ. ಅಧ್ಯಕ್ಷರು, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕೂತ್ಕುಂಜ ಇವರು ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ 2 ಜಿಲ್ಲೆಯ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದ ಉದ್ದೇಶ ಮತ್ತು ಜಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರಲ್ಲಾದ ಬದಲಾವಣೆಗಳ ಬಗ್ಗೆ ತಿಳಿಸಿದರು. ಪೈಲಾರು ಶ್ರೀ ಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಸದಸ್ಯರಾದ ಮನೋರಮಾ ರವರು ಅನಿಸಿಕೆ ವ್ಯಕ್ತಪಡಿಸಿದರು. ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರು ಸುರೇಶ್ ಕಣೆಮರಡ್ಕ ರವರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು, ಜನರಿಗೆ ದೊರಕುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಎಣ್ಣೆಮಜಲು ನಾಟಿ ವೈಧ್ಯೆ ಬಾಲಕ್ಕ, ಹಾಗೂ SSLC ಮತ್ತು PUC ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಜ್ಞಾನವಿಕಾಸ ಕೇಂದ್ರದ ಸದಸ್ಯರನ್ನು ಗುರುತಿಸಲಾಯಿತು.

ಕುಟುಂಬದ ಸಂಸ್ಕೃತಿ ಮತ್ತು ಸಂಸ್ಕಾರದ ಅನುಷ್ಠಾನದಲ್ಲಿ ಮಹಿಳೆಯರ ಪಾತ್ರ ಈ ವಿಚಾರ ಗೋಷ್ಠಿ ಯನ್ನು ಶ್ರೀಮತಿ ಶ್ರೀದೇವಿ ನಾಗರಾಜ್ ಭಟ್, ಕಾರ್ಯದರ್ಶಿಗಳು, ವೇದ ಮತ್ತು ಕಲಾ ಪ್ರತಿಷ್ಠಾನ ಇವರು ನೆರವೇರಿಸಿದರು. ಹಾಗೂ ಶ್ರೀಮತಿ ತ್ರಿವೇಣಿ, ಆಧ್ಯಾತ್ಮಿಕ ಸಂಯೋಜಕಿ, ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆ, ಚೊಕ್ಕಾಡಿ ಹಾಗೂ ಶ್ರೀಮತಿ ನಾಗರತ್ನ ದಯಾನಂದ, ಪರ್ಫೆಕ್ಟ್ ಬ್ಯೂಟಿ ಪಾರ್ಲರ್ ಸುಳ್ಯ ಇವರು ಸ್ವ ಉದ್ಯೋಗದ ಬಗ್ಗೆ ತಮ್ಮ ಅನುಭವ ಹಂಚಿಕೆ ಮಾಡಿದರು. ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮಿ ಜಳಕದ ಹೊಳೆ ಗ್ರಾಂ ಪಂಚಾಯತ್ ಅಧ್ಯಕ್ಷರು, ಪಂಜ, ಶಿವಪ್ರಸಾದ್ ಮಾದನಮನೆ, ಜನಜಾಗೃತಿ ವಲಯಾಧ್ಯಕ್ಷರು ಪಂಜ, ಶ್ರೀ ಧರ್ಮಪಾಲ ಕಣ್ಮಲ್ ವಲಯಾಧ್ಯಕ್ಷರು ಪಂಜಿ, ಎಲ್ಯಣ್ಣ ಗೌಡ ಕಟ್ಟ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ವಲಯಾಧ್ಯಕ್ಷರು, ತಾಲೂಕು ಯೋಜನಾಧಿಕಾರಿಗಳು ಮಾಧವ ಗೌಡ, ವಲಯ ಮೇಲ್ವಿಚಾರಕಿ ಶ್ರೀಮತಿ ಕಲಾವತಿ, ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಲಕ್ಷ್ಮಿ, ವಲಯದ ಸೇವಾಪ್ರತಿನಿಧಿಯವರು, ಸಿ.ಎಸ್.ಸಿ ಸೇವಾದಾರು. ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು. ತಾಲೂಕಿನ ಜ್ಞಾನವಿಕಾಸ ಕೇಂದ್ರಗಳ ಸದಸ್ಯರು ಉಪಸ್ಥಿತರಿದ್ದರು.

ಜ್ಞಾನವಿಕಾಸ ಕೇಂದ್ರಗಳ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಾದ ತಂಡ ಮತ್ತು ಸದಸ್ಯರಿಗೆ ಬಹುಮಾನ ವಿತರಣೆ ಮಾಡಲಾಯಿತು.ಹಾಗೂ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

add - BDG
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments