HomeFresh Newsಸುಳ್ಯ : ಮಣ್ಣು ಕುಸಿದು ಮೂವರು ಕಾರ್ಮಿಕರು ದುರ್ಮರಣ

ಸುಳ್ಯ : ಮಣ್ಣು ಕುಸಿದು ಮೂವರು ಕಾರ್ಮಿಕರು ದುರ್ಮರಣ

ಸುಳ್ಯ: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯದ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಘಟನೆ ನಡೆದಿದೆ. ಖಾಸಗಿ ವ್ಯಕ್ತಿಯೋರ್ವರು ತಮ್ಮ ಮನೆ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ ನಡೆಸುವ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಇಂದು ಕೆಲ ನಿರ್ವಹಿಸುವ ವೇಳೆ ಒಮ್ಮೆಲೇ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಸ್ಥಳದಲ್ಲಿದ್ದು ನಾಲ್ವರು ಓಡಿ ಪಾರಾಗಿದ್ದು, ಮೂವರು ಮಣ್ಣಿನಡಿ ಸಿಲುಕಿದ್ದರು. ಘಟನೆ ನಡೆದ ಕೂಡಲೇ ಜೇಸಿಬಿ ಮೂಲಕ ಮಣ್ಣಿನಡಿ ಸಿಲುಕಿದ್ದವರ ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಲಾಗಿದ್ದು, ಮಣ್ಣಿನಡಿ ಸಿಲುಕಿದ್ದವರನ್ನು ಹೊರತಗೆಯುವ ವೇಳೆಗೆ ಮೂವರು ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಸತತ ಒಂದುವರೆ ಗಂಟೆಗೂ ಅಧಿಕ ಸಮಯ ಕಾರ್ಯಾಚರಣೆ ನಡೆಸಲಾಯಿತು.

sullia soil collapse

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45), ಅವರ ಪತ್ನಿ ಶಾಂತಕ್ಕ (35), ಇನ್ನೊರ್ವ ಯುವಕ ( ಒರ್ವರ ಹೆಸರು ತಿಳಿದುಬರಬೇಕಾಷ್ಟೆ) ಮೃತರು ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಮಂಜುನಾಥ್, ತಾ.ಪಂ‌ ಇಒ ಭವಾನಿಶಂಕರ್, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮುಖ್ಯಾಧಿಕಾರಿ ಸುಧಾಕರ್, ಸುಳ್ಯ ಪೊಲೀಸರು, ಅಗ್ನಿಶಾಮಕ ದಳದವರು ಮತ್ತಿತರರು ಭೇಟಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments