ಸುಳ್ಯ: ಅಗಲಿದ ಪತ್ರಕರ್ತ ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಣೆ

ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು.


ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೇಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕಾರ್ಯನಿರತ ಪತ್ರಕರ್ತರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಪತ್ರಕರ್ತರಾದ ದುರ್ಗಾಕುಮಾರ್ ನಾಯರ್‌ಕೆರೆ, ಗಣೇಶ್ ಮಾವಂಜಿ ನುಡಿನಮನ ಸಲ್ಲಿಸಿದರು. ಪ್ರೆಸ್ ಕ್ಲಬ್ ಕೋಶಾಧಿಕಾರಿ ರಮೇಶ್ ನೀರಬಿದಿರೆ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷೆ ಜಯಶ್ರೀ ಕೊಯಿಂಗೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪತ್ರಕರ್ತರಾದ ಗಂಗಾಧರ ಮಟ್ಟಿ,ಶಿವ ಪ್ರಸಾದ್ ಕೇರ್ಪಳ, ಶರೀಫ್ ಜಟ್ಟಿಪಳ್ಳ, ತೇಜೇಶ್ವರ ಕುಂದಲ್ಪಾಡಿ, ಹಸೈನಾರ್ ಜಯನಗರ, ಮಿಥುನ್ ಕರ್ಲಪ್ಪಾಡಿ, ಪೂಜಾಶ್ರೀ ವಿತೇಶ್ ಕೋಡಿ, ಪ್ರಜ್ಞಾ ಎಸ್.ನಾರಾಯಣ್, ದಯಾನಂದ‌ ಕಲ್ನಾರ್, ಸತೀಶ್ ಹೊದ್ದೆಟ್ಟಿ, ಶಿವಪ್ರಸಾದ್ ಆಲೆಟ್ಟಿ, ಕುಶಾಂತ್ ಕೊರತ್ಯಡ್ಕ ಮತ್ತಿತರರು ಉಪಸ್ಥಿತರಿದ್ದರು.

add - BDG

Related Posts

Leave a Reply

Your email address will not be published.