HomeFresh Newsಸುಳ್ಯ : ಅಭಿವೃದ್ಧಿ ಕಾಣದ ರಸ್ತೆ: ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸುಳ್ಯ : ಅಭಿವೃದ್ಧಿ ಕಾಣದ ರಸ್ತೆ: ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸುಳ್ಯ ತಾಲೂಕಿನ ಕಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ಕಳಂಜ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ ಪಂಜಿಗಾರ್ ಮಣಿಮಜಲು ಸಂಪರ್ಕ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೂ ಸಹಿತ ಕಳಂಜ ಗ್ರಾ.ಪಂ.ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಈ ನಿಟ್ಟಿನಲ್ಲಿ ಒಂದನೇ ವಾರ್ಡ್‌ಗಳ ಗ್ರಾಮಸ್ಥರಾದ ನಾವು ಮುಂದಿನ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕೆ ನಮ್ಮ ವಾರ್ಡಿನ ಸಮಸ್ಯೆ ಬಗೆಹರಿಸದ ಹೊರತು ಮತ ಯಾಚನೆಗೆ ನಮ್ಮ ವಾರ್ಡಿಗೆ ಬಾರದಂತೆ ಎಚ್ಚರಿಕೆಯನ್ನು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments