ಸುಳ್ಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕ, ಸುಳ್ಯ ತಾಲೂಕು ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮ ಕೆವಿಜಿ ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ನಂತರ ವಿವಿಧ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮೋನಪ್ಪ ರಾಜರಾಂಪುರ, ಬಾಬು ಜಾಲ್ಸೂರು, ಜಾನಕಿ ಮುರುಳ್ಯ, ಮಹೇಶ್ ಕುಮಾರ್ ಮೇನಲಾ, ಚನಿಯ ಕಲ್ತಡ್ಕ, ವಿಜಯ ಅಲಡ್ಕ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
