ಸುಳ್ಯ:ಸ್ನೇಹದಲ್ಲಿ ಶ್ರೀ ಕೃಷ್ಣ ಲೀಲೋತ್ಸವ
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಅಂಗವಾಗಿ ದಿನಾಂಕ 12.8.2025 ನೇ ಮಂಗಳವಾರದಂದು ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಜರಗಿತು. ಪುಟಾಣಿ ಮಕ್ಕಳು ಕೃಷ್ಣನ ಬಾಲ ಲೀಲೆಗಳು ಮತ್ತು ಗೋಪಿಕೆಯರ ನ್ರುತ್ಯಗಳನ್ನು ಲವಲವಿಕೆಯಿಂದ ಮಾಡಿ ರಂಜಿಸಿದರು.
ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ, ಶಾಲೆಯ ಹಿರಿಯ ವಿದ್ಯಾರ್ಥಿನಿ ಲಾವಣ್ಯ ಆಚಾರ್, ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಹಾಗೂ ಪೋಷಕರು ಉಪಸ್ಥಿತರಿದ್ದರು.

















