HomeFresh Newsಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆಯಾಗಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು,ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ ಕುಂದಲ್ಪಾಡಿ, ಜೊತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್.ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ.ರೈ, ಕೃಷ್ಣ ಬೆಟ್ಟ, ಹಸೈನಾರ್ ಜಯನಗರ, ವಿಶ್ವನಾಥ ಮೋಟುಕಾನ, ಪದ್ಮನಾಭ ಮುಂಡೋಕಜೆ, ಗಣೇಶ್ ಮಾವಂಜಿ, ಸತೀಶ್ ಹೊದ್ದೆಟ್ಟಿ,ಪುಷ್ಪರಾಜ ಶೆಟ್ಟಿ ಆಯ್ಕೆಯಾದರು.

ಉಪಾಧ್ಯಕ್ಷರು ಪದ್ಮನಾಭ ಅರಂಬೂರು
ಪ್ರಜ್ಞಾ
ಜಯದೀಪ್ ಕುದ್ಕುಳಿ


ಗೌರವ ಸಲಹೆಗಾರರಾಗಿ ಮಾಜಿ ಅಧ್ಯಕ್ಷರಾದ ಗಂಗಾಧರ ಮಟ್ಟಿ, ದುರ್ಗಾಕುಮಾರ್ ನಾಯರ್‌ಕೆರೆ, ಗಂಗಾಧರ ಕಲ್ಲಪಳ್ಳಿ, ಜಯಪ್ರಕಾಶ್ ಕುಕ್ಕೇಟ್ಟಿ, ಗಿರೀಶ್ ಅಡ್ಪಂಗಾಯ, ಶಿವಪ್ರಸಾದ್ ಕೇರ್ಪಳ, ಗಿರೀಶ್ ಪೆರುಮುಂಡ ಆಯ್ಕೆಯಾದರು.

ವಾರ್ಷಿಕ ಮಹಾಸಭೆ:
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಅಧ್ಯಕ್ಷ ದಯಾನಂದ‌ ಕೊರತ್ತೋಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ವರದಿ ವಾಚಿಸಿದರು‌. ಕೋಶಾಧಿಕಾರಿ ದಯಾನಂದ ಕಲ್ನಾರ್ ಲೆಕ್ಕಪತ್ರ ಮಂಡಿಸಿದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments