ಸುಳ್ಯದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ – ದೈವಗಳ ಮೊರೆ ಹೋದ ಕಾಂಗ್ರೆಸ್ ಮುಖಂಡರು

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಇದೀಗ ದೈವದ ಮೊರೆ ಹೋಗಿದ್ದಾರೆ.

ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು ದೈವಗಳ ಎದುರು ಪ್ರಾರ್ಥಿಸಿಕೊಂಡಿದ್ದಾರೆ.

ಕೃಷ್ಣಪ್ಪ ಅವರ ಕುಮ್ಮಕ್ಕಿನಿಂದಲೇ ನಮ್ಮನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ಮಾಡಿದ್ದೇವೆ ಎಂದಾದರೆ ಕೃಷ್ಣಪ್ಪ ಅವರು ಬಂದು ದೈವದ ಎದುರು ಪ್ರಮಾಣ ಮಾಡಲಿ ಎಂದು ಅವರು ಸವಾಲೆಸಿದ್ದಾರೆ.

ಕಡಬ ಬ್ಲಾಕ್‍ನಲ್ಲಿ ಕಾಂಗ್ರೆಸ್ ಬಲಪಡಿಸಲು ನಾವು ಸತತವಾಗಿ ದುಡಿದಿದ್ದೇವೆ, ಆದರೂ ನಮಗೆ ಅನ್ಯಾಯ ಮಾಡಲಾಗಿದೆ, ಅನ್ಯಾಯ ಮಾಡಿದವರಿಗೆ ಸರಿಯಾದ ಬುದ್ದಿ ದೈವವೇ ಕರುಣಿಸಲಿ ಎಂದು ದೈವದ ಮುಂದೆ ಕಾಂಗ್ರೆಸ್ ಮುಖಂಡರು ಪ್ರಾರ್ಥಿಸಿದ್ದಾರೆ.

Related Posts

Leave a Reply

Your email address will not be published.