ಸುಳ್ಯ: ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಇನೋವಾ ಕಾರು ಪಲ್ಟಿ – ತಾಯಿ ಮಗು ಮೃತ್ಯು
ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ.ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಶಝಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.



















