ಸುಳ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು.
ಸುಳ್ಯದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಎಟಿಎಂ ಸರ್ಕಾರದ ಸಿ.ಎಂ ಮತ್ತು ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ , ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ರಾಕೇಶ್ ರೈ, ಸುನಿಲ್ ಕೇರ್ಪಳ, ಸುಭೋದ ಶೆಟ್ಟಿ, ರಾಧಾಕೃಷ್ಣ ರೈ ಬೂಡು, ನಗರ ಪಂಚಾಯತ್ ಸದಸ್ಯರಾದ ಸುದೇವ್,ಶಶಿಕಲ ನೀರಭಿದ್ರೆ , ಮೋಹಿನಿ ನಾಗರಾಜ್ ಪಕ್ಷದ ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.