ಸುಳ್ಯ: ಮಂಡೆಕೋಲಿನಲ್ಲಿ ಅರೆಭಾಷೆ ಗಡಿನಾಡ ಉತ್ಸವದ ಸಂಭ್ರಮ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮವಿಂದು ವಿನೂತನ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಿ ಉತ್ಸವದ ಕಳೆ ಮೇಳೈಸಿದೆ. ಅರೆಭಾಷೆ ಗಡಿನಾಡ ಉತ್ಸವ-2024ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ದೊರಕಿತು.

ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ. ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷ ಜಾಕೆ ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅದ್ದೂರಿ ಮೆರವಣಿಗೆಯನ್ನು ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಧುರೀಣ ಕುಶಾಲಪ್ಪ ಗೌಡ ಕುಕ್ಕೇಟಿ ಉದ್ಘಾಟಿಸಿದರು. ಚೆಂಡೆ ವಾದ್ಯ ಮೇಳಗಳು, ಕುಣಿತ ಭಜನೆಯೊಂದಿಗೆ ಆಕರ್ಷಕ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿತು.

ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಮಂಡೆಕೋಲು ಯಾದವ ಚಾರಿಟೇಬರ್ ಟ್ರಸ್ಟಿನ ಅಧ್ಯಕ್ಷ ರಾಮಚಂದ್ರ ಮಾಸ್ಟರ್ ಕೇನಾಜೆ, ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಜಿ. ಮಂಡೆಕೋಲು ಗ್ರಾಮ ಗೌಡ ಸಮಿತಿಯ ಉಸ್ತುವಾರಿ ನಿರ್ದೇಶಕರಾದ ಎಂ.ಎಚ್., ಸುರೇಶ್, ಶಿವಪ್ರಸಾದ್ ಉಗ್ರಾಣಿಮನೆ, ಕುಶಾಲಪ್ಪ ಗೌಡ ಕುಕ್ಕೇಟಿ, ಅರೆಭಾಷೆ ಅಕಾಡೆಮಿ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು, ಪಿ.ಎಸ್.ಕಾರ್ಯಪ್ಪ ಅಕಾಡೆಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.