ಸುಳ್ಯ : ಎಎನ್‌ಎಂಸಿ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕವಾಗಿದ್ದು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಉಪಸ್ಥಿತಿಯಲ್ಲಿ ಜವಾಬ್ದಾರಿ ವಹಿಸಿಕೊಂಡರು. ಇವರು ಈ ಹಿಂದೆ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಸಂದರ್ಭದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

add- Suraj

Related Posts

Leave a Reply

Your email address will not be published.