ಸುಳ್ಯದಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುಳ್ಯ: ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಾವು ಸಾಹಿತ್ಯವನ್ನು ಓದುವ ಮೂಲಕ ಸಾಹಿತ್ಯವನ್ನು ಸಾಹಿತ್ಯದ ವಿಚಾರವನ್ನು ಅವರಿಗೆ ಹೇಳಬೇಕೆಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೆ.ಆರ್ ಗಂಗಾಧರ ಹೇಳಿದರು. ಅವರು ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ವಿಮರ್ಶಕ ವಿಜಯಶಂಕರ ಸಮ್ಮೇಳನವನ್ನು ಉದ್ಘಾಟಿಸಿದರು.

ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಹಿಂಗಾರ ಅರಳಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು ಮಡಿಕೇರಿ ಆಕಾಶವಾಣಿ ಉದ್ಗೋಷಕ ಸುಬ್ರಾಯ ಸಂಪಾಜೆ ಹೊಸ ಕೃತಿಗಳನ್ನು ಬಿಡುಗಡೆ ಮಾಡಿದರು. ರಾಷ್ಟ್ರ ಧ್ವಜಾರೋಹಣವನ್ನು ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ ಹಮೀದ್ ,ಪರಿಷತ್‍ನ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್, ಮತ್ತು ಕನ್ನಡ ಧ್ವಜಾರೋಹಣವನ್ನು ಕಸಾಪ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲ್ ನೆರವೇರಿಸಿದರು. ವಸ್ತು ಪ್ರದರ್ಶನವನ್ನು ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ,ಪುಸ್ತಕ ಪ್ರದರ್ಶನವನ್ನು ತಹಶೀಲ್ದಾರ್ ಅನಿತಾಲಕ್ಷ್ಮಿ ಉದ್ಘಾಟಿಸಿದರು.

ಕುಕ್ಕೆ ಸುಬ್ರಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.ಸ್ಮರಣ ಸಂಚಿಕೆ ಸಂಪಾದಕ ಸಂಜೀವ ಕುದ್ಪಾಜೆ ಸ್ಮರಣ ಸಂಚಿಕೆಯ ಬಗ್ಗೆ ಮಾತ ಕನ್ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ ಶ್ರೀನಾಥ್ ಸಮ್ಮೇಳನದ ಬಗ್ಗೆ ಆಶಯ ನುಡಿ ವ್ಯಕ್ತಪಡಿಸಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೇರಾಲ್ ಪ್ರಾಸ್ತವಿಕವಾಗಿ ಮಾತನಾಡಿದರು.ಡಾ.ಲೀಲಾಧರ ಸಮ್ಮೇಳನ ಅಧ್ಯಕ್ಷರ ಪರಿಚಯ ಮಾಡಿದರು. ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಬೀಜದಕಟ್ಟೆ ಸ್ವಾಗತಿಸಿ ಮಾತನಾಡಿದರು.ಬೀಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.ತೇಜಸ್ವಿ ಕಡಪಳ ವಂದಿಸಿದರು

Related Posts

Leave a Reply

Your email address will not be published.