HomeFresh Newsಸುಳ್ಯ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

ಸುಳ್ಯ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

ಸುಳ್ಯ: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ಈರಯ್ಯ ದೂಂತೂರು ಅವರಿಗೆ ವರ್ಗಾವಣರಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದೆ. ಈರಯ್ಯ ದೂಂತೂರು ಅವರನ್ನು ಸುಳ್ಯ ಎಸ್‌ಐ ಆಗಿ ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ.

2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತೂರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್‌ಐ ಆಗಿ ಬಳಿಕ ಬೆಳ್ಳಾರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದರು. ಬಳಿಕ ಉಪ್ಪಿನಂಗಡಿ, ಶಿರಸಿ, ಕುಂದಾಪುರದಲ್ಲಿ ಎಸ್‌ಐ ಆಗಿ ಕರ್ತವ್ಯ ನಿರ್ವಹಿಸದ ಬಳಿಕ ಅವರು ಸುಳ್ಯ ಎಸ್‌ಐ ಆಗಿ ನೇಮಕಗೊಂಡಿದ್ದಾರೆ. ಖಡಕ್ ಅಧಿಕಾರಿಯಾದ ಈರಯ್ಯ ದೂಂತೂರು ಕವಿ, ಸಾಹಿತಿಯಾಗಿಯೂ ಗುರುತಿಸಿ ಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments