ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಬಂಧನ ಖಂಡನೀಯ : ಎಸ್ ಡಿಪಿಐ

ಮಂಗಳೂರು: ಅನಧಿಕೃತ ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಲು ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಇಂದು ಸುರತ್ಕಲ್ ಟೋಲ್ ಬಳಿ ಪ್ರತಿಭಟನೆ ನಡೆಸುತ್ತುದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆಯನ್ನು ಎಸ್ ಡಿಪಿಐ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ತೀವ್ರವಾಗಿ ಖಂಡಿಸಿದ್ದಾರೆ.
ಈ ದೇಶದ ಸಂವಿಧಾನವು ಅನ್ಯಾಯ, ಅನೀತಿ, ಅಕ್ರಮದ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ನೀಡಿದೆ ಆದರೆ ಬಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಸರಕಾರದ ಮತ್ತು ಫ್ಯಾಶಿಸಂ ವಿರುದ್ಧ ಯಾರು ಧ್ವನಿಯೆತ್ತುತ್ತಾರೆ ಅಂತಹ ಹೋರಾಟಗಾರರನ್ನು ಸುಳ್ಳು ಪ್ರಕರಣಗಳನ್ನು ಹಾಕಿ ಬಂಧಿಸುವಂತಹ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ ಟೋಲ್ ವಿರೋಧಿ ಹೋರಾಟಗಾರರ ಬಂಧನ ಅದರ ಮುಂದುವರಿದ ಭಾಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಸರಕಾರ ಪೊಲೀಸ್ ವ್ಯವಸ್ಥೆಯನ್ನು ಮತ್ತು ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸುವುದರ ವಿರುದ್ಧ ಎಲ್ಲರೂ ಒಟ್ಟಾಗಿ ವಿರೋಧಿಸಬೇಕಾಗಿದೆ ಅದೇ ರೀತಿ ಟೋಲ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.