HomeFresh Newsಸುರತ್ಕಲ್‍ || ಕಾಂಪೌಂಡ್ ಕುಸಿದು ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ

ಸುರತ್ಕಲ್‍ || ಕಾಂಪೌಂಡ್ ಕುಸಿದು ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ

ರಸ್ತೆ ಬದಿಯಲ್ಲಿ ಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ನಡೆದಿದೆ.

ಬಜ್ಪೆ ಕರಂಬಾರು ನಿವಾಸಿ ಹನೀಫ್ ಮೃತಪಟ್ಟ ವ್ಯಕ್ತಿಯಾಗಿದ್ದು, ಮಣಿ ಎಂಬವರು ಗಾಯಗೊಂಡಿದ್ದಾರೆ. ಕೃಷ್ಣಾಪುರ ನಿವಾಸಿ ಶರೀಫ್ ಎಂಬವರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದುಕೊಂಡು ಕೆಲಸ ಮಾಡಿಸುತ್ತಿದ್ದರು ಎಂದು ತಿಳಿದುಬಂದಿದೆ.

ಹನೀಫ್ ಮತ್ತು ಮಣಿ ಅವರು ಚರಂಡಿ ಅಗೆಯುತ್ತಿದ್ದ ವೇಳೆ ಏಕಾಏಕಿ ಪಕ್ಕದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಕೆಲಸಗಾರರ ಮೇಲೆ ಬಿದ್ದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಾಗಲೇ ಹನೀಫ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಮಣಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹನೀಫ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments