ಸುರತ್ಕಲ್: ಅನುದಾನ ಸಿಗದೆ ಆಶ್ರಯ ಮನೆ ಪೂರ್ಣಗೊಂಡಿಲ್ಲ-ಫಲಾನುಭವಿಗಳ ಅಳಲು

ಸುರತ್ಕಲ್: ಅನುದಾನ ಸಿಗದೇ ಆಶ್ರಯ ಮನೆ ಪೂರ್ಣಗೊಂಡಿಲ್ಲ. ಆರ್ಥಿಕ ಸಂಕಷ್ಟದಿಂದಾಗಿ ಬಾಡಿಗೆ ಮನೆಯಲ್ಲಿ ಇರುವುದೂ ಸಾಧ್ಯವಾಗುತ್ತಿಲ್ಲ. ಹೃದಯ ಖಾಯಿಲೆಯಿಂದ ಬಳಲುತ್ತಿದ್ದು ಕೆಲಸ ಮಾಡಲೂ ಆಗುತ್ತಿಲ್ಲ. ನಮಗೆ ಎಪಿಎಲ್ ಕಾರ್ಡು ಬದಲು ಬಿಪಿಎಲ್ ಮಾಡಿ ಕೊಡಿ ಎಂದು ಕೆಲ ಮಹಿಳೆಯರು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ.

ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮನವಿಗಳನ್ನು ಸ್ವೀಕರಿಸಿ ಮಾತನಾಡಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.6ರಲ್ಲಿ 600 ಮನೆಗಳ ಸಮುಚ್ಚಯ ಜಿ ಪ್ಲಸ್ 3 ಮಾದರಿಯಲ್ಲಿ ನಿರ್ಮಾಣವಾಗುತ್ತಿದ್ದು, ಅನುದಾನದ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಮುಂದುವರೆಯುತ್ತಿಲ್ಲ. ಸರಕಾರ ಅನುದಾನ ಶೀಘ್ರ ಬಿಡುಗಡೆ ಮಾಡಲು ಒತ್ತಾಯ ಮಾಡಿದ್ದೇನೆ, ಪೂರ್ಣಗೊಳಿಸಲು ಸಕಲ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮನಪಾ ಸದಸ್ಯರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.