3 ದಿನಗಳಲ್ಲಿ ಟೋಲ್‍ಗೇಟ್ ತೆರವು ಅಂತಿಮ ಆದೇಶ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಭರವಸೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸದಿರುವ ಕುರಿತು ಚರ್ಚಿಸಲು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ದ.ಕ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯವರಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ

ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫರ್ನಾಂಡೀಸ್, ಸನ್ನಿ ಡಿಸೋಜ, ಕೆ. ಯಾದವ ಶೆಟ್ಟಿ. ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ ದೇವದಾಸ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.