HomeFresh Newsಹಲವಾರು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‍ಗೆ ಮುಕ್ತಿ

ಹಲವಾರು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‍ಗೆ ಮುಕ್ತಿ

ಹಲವಾರು ಪ್ರತಿಭಟನೆಗಳ ನಂತರ ಇಲ್ಲಿನ ಟೋಲ್ ಗೇಟಿಗೆ ಕೊನೆಗೂ ಮುಕ್ತಿ ದೊರಕಿದ್ದು, ಶುಕ್ರವಾರದಿಂದ ವಾಹನಗಳು ಉಚಿತವಾಗಿ ಸಂಚರಿಸುತ್ತಿವೆ. ಈ ನಡುವೆ ಈ ಶುಲ್ಕ ಕೇಂದ್ರದಲ್ಲಿ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಅಧಿಕ ಮಂದಿ ಉದ್ಯೋಗ ವಂಚಿತರಾಗಿದ್ದಾರೆ. ಗುರುವಾರ ಮುಂಜಾನೆ ಶುಲ್ಕ ಕೇಂದ್ರದ ಕೆಲ ಸಿಬ್ಬಂದಿಗಳು ಆಗಮಿಸಿ ಕುರ್ಚಿಗಳಲ್ಲಿ ಕುಳಿತು ಮೊಬೈಲ್ ವೀಕ್ಷಿಸುತ್ತಿದ್ದ ದೃಶ್ಯ ಕಂಡು ಬಂತು.ಹೆಜಮಾಡಿಯ ನವಯುಗ ಟೋಲ್ ಗೇಟ್ ಗೆ ಕೇಂದ್ರ ಸರ್ಕಾರ ನಡೆಸುತ್ತಿದ್ದ ಸುರತ್ಕಲ್ ಟೋಲ್ ಗೇಟ್ ವಿಲೀನವಾಗಿದೆ. ಇದರ ನಡುವೆ ಇಲ್ಲಿನ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಇಂದು ಸಂಜೆ ವಿಜಯೋತ್ಸವ ಸಭೆ ನಡೆಸಲು ನಿರ್ಧರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments