ಸುರತ್ಕಲ್: ರಸ್ತೆ ಮಧ್ಯೆ ಬೆಂಕಿಗಾಹುತಿಯಾದ ಕಾರು
ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.
ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಕುಂದಾಪುರ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.
ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ
ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ರಸ್ತೆ ಮಧ್ಯದಲ್ಲಿದ್ದ ಕಾರನ್ನು ತೆರವುಗೊಳಿಸಲಾಯಿತು.