HomeFresh Newsಸುರತ್ಕಲ್: ಫೆ.18 ರಂದು ಸುರತ್ಕಲ್ ನಲ್ಲಿ ಆಯುಷ್ಮಾನ್ ಮತ್ತು ಇ ಶ್ರಮ ಕಾಡ್೯ ವಿತರಣೆ

ಸುರತ್ಕಲ್: ಫೆ.18 ರಂದು ಸುರತ್ಕಲ್ ನಲ್ಲಿ ಆಯುಷ್ಮಾನ್ ಮತ್ತು ಇ ಶ್ರಮ ಕಾಡ್೯ ವಿತರಣೆ

ಸುರತ್ಕಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಬಂಟರ ಸಂಘ (ರಿ) ಸುರತ್ಕಲ್ ಇದರ ಸಹಯೋಗದಲ್ಲಿ ಸಾರ್ವಜನಿಕರಿಗೆ ಅಯುಷ್ಮಾನ್ ಭಾರತ ಕಾರ್ಡ್ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯ ಕ್ರಮ ಸಮಾರಂಭ ಫೆಬ್ರವರಿ 18 ರಂದು ಆದಿತ್ಯವಾರ ಬೆಳಿಗ್ಗೆ 9-30 ಕ್ಕೆ ಬಂಟರ ಭವನ ಸುರತ್ಕಲ್ ಇಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ.
ಮಂಗಳೂರು ನಗರ ಪಾಲಿಕೆ ಸದಸ್ಯರು ನಯನಾ ಕೋಟ್ಯಾನ್ ಉದ್ಘಾಟಿಸಲಿದ್ದಾರೆ.
ಅತಿಥಿಗಳಾಗಿ ಮಂಗಳೂರು ನಗರ ಪಾಲಿಕೆ ಸದಸ್ಯೆ ಶ್ವೇತಾ ಪೂಜಾರಿ, ಕಾಟಿಪಳ್ಳ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಭರತ್ ಮೊದಲಾದವರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments