HomeFresh Newsಸುರತ್ಕಲ್: ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ಇದೆ: ಅಬ್ದುಲ್ ಬಶೀರ್

ಸುರತ್ಕಲ್: ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ಇದೆ: ಅಬ್ದುಲ್ ಬಶೀರ್

ಸುರತ್ಕಲ್: ಭಾರತವು ಕೃಷಿ ಪ್ರಧಾನವಾದ ದೇಶವಾಗಿದ್ದು ಇಂದಿನ ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ವಿದೆ ಎಂದು ನಿವೃತ್ತ ಸುರತ್ಕಲ್ ಕೃಷಿ ಅಧಿಕಾರಿ ಅಬ್ದುಲ್ ಬಸೀರ್ ನುಡಿದರು ಅವರು ಬಂಟರ ಸಂಘ ಸುರತ್ಕಲ್, ಲಯನ್ಸ್ ಕ್ಲಬ್ ಸುರತ್ಕಲ್ ಮತ್ತು ಜೆಸಿಐ ಸುರತ್ಕಲ್ ಸಹಯೋಗ ದಲ್ಲಿ ಬಂಟರ ಭವನ ಸುರತ್ಕಲ್ ನಲ್ಲಿ ನಡೆದ ಸಾವಯವ ಕೃಷಿಕರ ಮತ್ತು ಗ್ರಾಹಕರ ಮುಖಾಮುಖಿ ಕಾರ್ಯ ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು ಇಂದಿನ ಕಾಲಘಟ್ಟದಲ್ಲಿ ನಮ್ಮ ಆರೋಗ್ಯ ದ ಹಿತದೃಷ್ಟಿಯಿಂದ ಸಾವಯವ ಕೃಷಿಯ ಅಗತ್ಯತೆ ಇದೆ ಗ್ರಾಹಕರು ನೆರವಾಗಿ ಕೃಷಿಕರಿಂದ ಆಹಾರದ ಪದಾರ್ಥಗಳನ್ನು ಖರೀದಿ ಮಾಡಿದಲ್ಲಿ ಕೃಷಿಕರಿಗೆ ಪ್ರಯೋಜನವಾಗಲಿದೆ ಎಂದರು ಮುಖ್ಯ ಅತಿಥಿಯಾಗಿ ಕೃಷಿಕರಾದ ಎಕ್ಕಾರು ಸದಾಶಿವ ಶೆಟ್ಟಿ, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಜಯಂತ ಶೆಟ್ಟಿ ತಡಂಬೈಲ್ ಜೆಸಿಐ ಸುರತ್ಕಲ್ ಅಧ್ಯಕ್ಷೆ ಜ್ಯೋತಿ ಪಿ ಶೆಟ್ಟಿ, ,ಬಂಟರ ಸಂಘ ಸುರತ್ಕಲ್ ನಿಕಟಪೂರ್ವಧ್ಯಕ್ಷ ಸುಧಾಕರ ಪೂಂಜಾ,ಕೃಷಿ ಸಮಿತಿ ಸಂಚಾಲಕ ಮೆಬೈಲ್ ಸದಾಶಿವ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಿದರು ಕಾರ್ಯ ಕ್ರಮ ನಿರೂಪಣೆಯನ್ನು ಪುಷ್ಷರಾಜ್ ಶೆಟ್ಟಿ ಮಧ್ಯ ನೆರವೇರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments