HomeFresh Newsಜ.12ರಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಚ್ಛ ಉಡುಪಿ

ಜ.12ರಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಚ್ಛ ಉಡುಪಿ

ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಜನವರಿ 12ರ ಗುರುವಾರದಂದು ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ, ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ರಜತೋತ್ಸವ ಸಮಿತಿಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ 1096 ಸರಕಾರೀ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸುಮಾರು 1,60,000 ಶಾಲಾ ಮಕ್ಕಳಿಂದ ಏಕಕಾಲದಲ್ಲಿ ಆಯಾಯ ಶಾಲೆಗಳ ಅಕ್ಕ ಪಕ್ಕದ ವಠಾರದಲ್ಲಿ “ಸ್ವಚ್ಛ ಉಡುಪಿ” ಎಂಬ ಶೀರ್ಷಿಕೆಯೊಂದಿಗೆ ಸ್ವಚ್ಛತಾ ಮತ್ತು ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.

ಈ ಕಾರ್ಯಕ್ರಮದೊಂದಿಗೆ “ಕಸದಿಂದ ರಸ” ಕಲ್ಪನೆಯೊಂದಿಗೆ ಮಕ್ಕಳಲ್ಲಿ ತ್ಯಾಜ್ಯದ ಮರುಬಳಕೆಯನ್ನು ಪೆÇ್ರೀತ್ಸಾಹಿಸಲು ಕಸ / ತ್ಯಾಜ್ಯದಿಂದ ಆರ್ಟ್, ಕ್ರಾಫ್ಟ್ ಹಾಗೂ ಉಪಯುಕ್ತ ವಸ್ತುಗಳನ್ನು ತಯಾರಿಸುವ ಒಂದು ವಿಶೇಷ ಸ್ಪರ್ಧೆಯನ್ನು ಮಕ್ಕಳಿಗೆ ಶಾಲಾ ಮಟ್ಟದಲ್ಲಿ ಆಯೋಜಿಸಿತಿದ್ದೇವೆ. ಪ್ರಥಮ ಮೂರು ಸ್ಥಾನ ಪಡೆದ ಶಾಲೆಗಳಿಗೆ ವಿಶೇಷ ಟ್ರೋಫಿಯನ್ನು ನೀಡುವವರಿದ್ದೇವೆ. ಈ ಕಾರ್ಯಕ್ರಮದ ಪ್ರಚಾರ ಮತ್ತು ಆಯೋಜನ ಸಾಮಗ್ರಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗಿರುತ್ತದೆ.

ದಿನಾಂಕ 12.01.2023 ರಂದು ಉಡುಪಿ ನಗರಸಭೆ ಸಹಯೋಗದೊಂದಿಗೆ ಬೆಳಿಗ್ಗೆ 9 ರಿಂದ 10.30 ಗಂಟೆಯವರೆಗೆ ಅಭಿಯಾನದ ಉದ್ಘಾಟನಾ ಸಮಾರಂಭ ಚಿಟ್ಪಾಡಿಯ ದೇವಾಡಿಗರ ಸಭಾ ಭವನದಲ್ಲಿ ನಡೆಯಲಿದೆ. ಸುಮಾರು 500 ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲುಗೊಳ್ಳುವ ನಿರೀಕ್ಷೆ ಇದೆ .ಈ ಕಾರ್ಯಕ್ರಮದಲ್ಲಿ ತ್ಯಾಜ್ಯದ ಬಗ್ಗೆ ಮಕ್ಕಳಿಗೆ ಮಾಹಿತಿ, ನಿರ್ವಹಣೆ ಮತ್ತು ಕಳಕಳಿಯ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿಯನ್ನು ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಪ್ರಧಾನಿ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನ್ನು ಸಾಕಾರಗೊಳಿಸುವ ಮತ್ತು ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಸ್ವಚ್ಛತೆ ಮತ್ತು ತ್ಯಾಜ್ಯದ ಸಮರ್ಪಕ ನಿರ್ವಹಣೆ ಬಗ್ಗೆ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ದೇಶದಲ್ಲೇ ಅತೀ ದೊಡ್ಡ ಮಟ್ಟಿನ ಸ್ವಚ್ಛತಾ ಮತ್ತು ಜಾಗೃತಿ ಅಭಿಯಾನ ಇದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments