HomeFresh Newsಜಿಲ್ಲಾಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಸ್ವರ ಶೆಟ್ಟಿಗೆ ಚಿನ್ನದ ಗರಿ

ಜಿಲ್ಲಾಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಸ್ವರ ಶೆಟ್ಟಿಗೆ ಚಿನ್ನದ ಗರಿ

ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆ ಮಂಗಳೂರಿನ 8ನೇ ತರಗತಿ ವಿದ್ಯಾರ್ಥಿನಿ ಸ್ವರ ಶೆಟ್ಟಿ ಅವರು 20 ಸೆಪ್ಟೆಂಬರ್2026 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಸ್ವರ ಅವರು 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರುಅಲ್ಲದೆ, ಉದ್ದ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ಗಳಿಸಿದರು. ತಮ್ಮ ಕ್ರೀಡಾ ಪ್ರತಿಭೆ, ದೃಢಸಂಕಲ್ಪ ಹಾಗೂ ಪರಿಶ್ರಮದ ಮೂಲಕ ಸ್ವರ ಅವರು ಶಾಲೆಗೆ ಕೀರ್ತಿ ತಂದಿದ್ದಾರೆ. ಸ್ವರ ಶೆಟ್ಟಿ ಅವರ ಈ ಸಾಧನೆಯನ್ನು ಶಾಲೆಯ ಪ್ರಾಂಶುಪಾಲರಾದ ವಂ. ಫಾ. ರೋಹನ್ ಡಿ’ಅಲ್ಮೇಡಾ ಎಸ್.ಜೆ. ಉಪ ಪ್ರಾಂಶುಪಾಲರಾದ ಶ್ರೀಮತಿ ಲಾರೆಲ್ ಡಿ’ಸೋಜಾ, ಶ್ರೀಮತಿ ಅಪರ್ಣಾ ಸುರೇಶ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ, ಅವರ ಮುಂದಿನ ಕ್ರೀಡಾ ಪಯಣಕ್ಕೆ ಶುಭ ಹಾರೈಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments