Home Posts tagged #accident

ಉಳ್ಳಾಲ: ನಾಟೆಕಲ್ ಬೈಕ್ ಅಪಘಾತ – ಬೈಕ್‌ನಲ್ಲಿದ್ದ ಇಬ್ಬರು ಮೃತ್ಯು

ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ

ದುಬೈ ರಸ್ತೆ ಅಪಘಾತಕ್ಕೆ ತಾ.ಪಂ ಮಾಜಿ ಉಪಾಧ್ಯಕ್ಷೆ ಏಕೈಕ ಪುತ್ರಿ ದಾರುಣ ಸಾವು

ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ

ಇಂಗ್ಲೆಂಡಿನಲ್ಲಿ ಭಾರತೀಯನ ಸಾವು : ಕೊಲೆ ನಡೆಯಿತೇ, ಅಪಘಾತವೇ?

ಲಂಡನ್ : ಇಂಗ್ಲೆಂಡಿನಲ್ಲಿ ಭಾರತೀಯ ಮೂಲದ 36ರ ವಿಘ್ನೇಶ್ ಪಟ್ಟಾಭಿರಾಮನ್ ಎಂಬವರ ಸಾವು ಆಗಿದೆ. ಸೈಕಲಿನಲ್ಲಿ ಮನೆಗೆ ಹೋಗುವಾಗ ಅಪಘಾತವಾಗಿ ಸಾವಾಗಿದೆ ಎಂದು ಒಂದು ವರದಿ ಹೇಳಿದರೆ ಇನ್ನೊಂದು ಅದು ಕೊಲೆ ಎಂದು ವರದಿ ಮಾಡಿದೆ.ಬ್ರಿಟನ್ನಿನ ವೆಲ್ ರೀಡಿಂಗ್‌ನಲ್ಲಿ ಹೋಟೆಲೊಂದರ ಮ್ಯಾನೇಜರ್ ಆಗಿ ವಿಘ್ನೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಹೋಟೆಲಿಗೆ ಹತ್ತಿರದ ಪ್ಲೇಸ್ ಜಂಕ್ಷನ್‌ನಲ್ಲಿ ಸೈಕಲಿನಿಂದ ಅವರು ಬಿದ್ದು ಮೃತರಾಗಿದ್ದಾರೆ. ಬೀಳಲು

ಕಾಪು: ಟೆಂಪೊ ಪಲ್ಟಿ : ಸಂಚಾರ ಅಸ್ತವ್ಯಸ್ತ

ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ ಬಿದ್ದಿವೆ. ಟೆಂಪೋ ಕೂಡ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು,

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ-ಮೂವರಿಗೆ ಗಾಯ

ಕೊಕ್ಕಡ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9ರಂದು ರಾತ್ರಿ ನಡೆದಿದೆ.ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ-ಸವಾರನಿಗೆ ಗಂಭೀರ ಗಾಯ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು-ಬಲ್ಯ ಕ್ರಾಸ್‌ ಬಳಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನ ಸವಾರ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿಯವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೋಂತಿಲ ನಿವಾಸಿ ದಿನೇಶ್ ಶೆಟ್ಟಿ ನೆಲ್ಯಾಡಿಯಲ್ಲಿ ಟೈಲರ್ ಆಗಿರುವ ಇವರು ಫೆ.6ರಂದು ರಾತ್ರಿ 7.30ರ ವೇಳೆಗೆ ಕೆಲಸ ಮುಗಿಸಿ ತನ್ನ

ಮಂಗಳೂರು: ಕೊಟ್ಟಾರದಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಮಂಗಳೂರಿನ ಕೊಟ್ಟಾರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸ್ಕೂಟರ್‌ಗೆ ಲಾರಿಯೊಂದು ಢಿಕ್ಕಿಯಾಗಿದ್ದು, ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರನ ಮೇಲೆ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.  

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಡಿಕ್ಕಿ: ತೀವ್ರ ಗಾಯಗೊಂಡ ಮಹಿಳೆ

ನೆಲ್ಯಾಡಿ: ಪೆರಿಯಶಾಂತಿಯ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರೂ ತೀವ್ರವಾದ ಗಾಯಗೊಂಡ ಘಟನೆ ಸಂಭವಿಸಿದೆ. ಕಡಬ ಸಮೀಪದ ಕುಟ್ರುಪಾಡಿ ನಿವಾಸಿಯಾದ ರಾಜು, ಅ್ಯನಿ, ಸಿನ್ಸಿ, ಮೇರಿ ಎಂಬುವರು ಕೆನಡಕ್ಕೆ ತೆರಳುವ ಮಗನನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಅ್ಯನಿ ಎಂಬ ಮಹಿಳೆಯ ಕೈ ಹಾಗೂ ಕಾಲುಳಿಗೆ ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಮಂಗಳೂರಿನ

ಕಡಿಯಾಳಿ: ಹಾಲಿನ ಟ್ರೇಗಳಿಗೆ ಢಿಕ್ಕಿಯಾದ ಪಿಕಪ್ ವಾಹನ: ಹಾಲು ರಸ್ತೆಪಾಲು

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಪಿಕಪ್ ವಾಹನವೊಂದು ಹಾಲಿನ ಬೂತ್ ಎದುರಿಗಿದ್ದ ಟ್ರೇಗಳಿಗೆ ಡಿಕ್ಕಿ ಹೊಡೆದ ಘಟನೆ ಕಡಿಯಾಳಿಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪರಿಣಾಮ ಹಾಲಿನ ಪ್ಯಾಕೇಟ್‍ಗಳು ಒಡೆದು ಹಾಲು ಚೆಲ್ಲಾಪಿಲ್ಲಿಯಾಗಿದೆ. ದ್ವಿಚಕ್ರ ವಾಹನ ಹಾಗೂ ಪಕ್ಕದಲ್ಲಿದ್ದ ಸ್ಯೆಕಲ್ ಸವಾರರು ಅಪಾಯದಿಂದ ಪಾರಾಗಿದ್ದಾರೆ.

ಉತ್ತರ ಕನ್ನಡ: ಶಿರಸಿಯಲ್ಲಿ ಭೀಕರ ರಸ್ತೆ ಅಪಘಾತ ; ಮಂಗಳೂರಿನ ಕಂದಾವರ ಮೂಲದ ನಾಲ್ವರ ದುರ್ಮರಣ

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಕುಮಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು