Home Posts tagged #accident (Page 2)

ಸೈಕಲ್‌ಗೆ ಢಿಕ್ಕಿಯಾದ ಕಾರು: ಸೈಕಲ್ ಸವಾರ ಸಾವು

ಕುಂದಾಪುರ: ಸೈಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ. ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ.ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ

ಹುತಾತ್ಮರ ದಿನಾಚರಣೆ ಆಚರಿಸಿ ವಾಪಸ್ಸಾಗುತ್ತಿದ್ದಾಗ ಅಪಘಾತ: ರೈತ ಮುಖಂಡರಿಬ್ಬರು ಮೃತ್ಯು

ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು ಬಳಿ ಅಪಘಾತ ಸಂಭವಿಸಿದ್ದು ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೆ 

ಸುಬ್ರಹ್ಮಣ್ಯದಲ್ಲಿ ಸರಕಾರಿ ಬಸ್-ಕಾರು ಮಧ್ಯೆ ಅಪಘಾತ

ಕಡಬ: ಸರಕಾರಿ ಬಸ್ ಹಾಗೂ ಕಾರೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ

ವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಪ್ ನರ್ಸ್ ಮತ್ತು ಬೈಕ್ ಸವಾರ

ಕಡಬದಲ್ಲಿ ಸ್ಕೂಟಿಗೆ ಓಮಿನಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು ಪ್ರಾಥಮಿಕ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ. ಬೈಕ್ ಸವಾರರೊಬ್ಬರನ್ನು ಅಲಂಕಾರು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದಿರುವ ಓಮಿನಿ ಕಾರು ಕಡಬದಿಂದ ಕುಂತೂರು ಕಡೆಗೆ