ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್ ಬಳಿ ನಡೆದಿದೆ.ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೆÇಲೀಸ್ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ,
ನೆಲ್ಯಾಡಿ: ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ಯಾವುದೋ ವಾಹನವೊಂದು ಡಿಕ್ಕಿ ಯಾಗಿ ಪರಾರಿಯಾಗಿದ್ದು ಈ ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.6ರ ಮುಂಜಾನೆ 3 ಗಂಟೆ ವೇಳೆಗೆ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟವರು ಹಾಸನ ನಿವಾಸಿಗಳು ಎಂದು ತಿಳಿದುಬಂದಿದೆ. ಮಿನಿ ಲಾರಿ ಹಾಸನದಿಂದ ಮಂಗಳೂರಿಗೆ ಬರುತ್ತಿತ್ತು. ಶಿರಾಡಿ ಘಾಟ್ ನ ಕೆಂಪು ಹೊಳೆ
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕೋಳಿ ಸಾಗಾಟದ ಲಾರಿ ರಸ್ತೆಗೆ ಪಲ್ಟಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ.ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದ ರಸ್ತೆಗೆ ಉರುಳಿದೆ. ಘಟನೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ.
ಕುಂದಾಪುರ ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಜಯದುರ್ಗಾ ಬಸ್ ಚಾಲಕ ಮಾಬಲ ತೋಪ್ಲು ಅವರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಎಂದಿನಂತೆ ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಬಸ್ ನ್ನು ನೂಜಾಡಿ ಸ್ಟಾಪ್ ನಲ್ಲಿ ನಿಲ್ಲಿಸಿ ಬೈಕ್ ನಿಂದ ಹೆಮ್ಮಾಡಿ ಯಿಂದ ತೋಪ್ಲುಗೆ ತೆರಳುತ್ತಿದ್ದ ಸಂದರ್ಭ ಹೆಮ್ಮಾಡಿ ಹಾಲು ಡೈರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂಟರ್ನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ
ಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ ೩೩ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ಬಜ್ಪೆ ಮೂಲದ ಕಿಶೋರ್ ಶೆಟ್ಟಿ(35) ಮತ್ತು ಫಿಲೀಪ್ ಮೇರಿ ಲೋಬೋ (34) ಎಂದು ಗುರುತಿಸಲಾಗಿದೆ.ನಿತೀಶ್ ಭಡಾರಿ(35), ಪ್ರೀತಿ ಲೋಬೋ(29) ಮತ್ತು ಹರೀಶ್(62)
ಪಡುಬಿದ್ರಿ: ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿಯಾದ ಕಾರು: ನಜ್ಜುಗುಜ್ಜಾದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು ಅತೀ ವೇಗದ ಚಾಲನೆಯಿಂದಾಗಿ ನಿಯಂತ್ರಣ ಕಳೆದುಕೊಂಡ ಕಾರೊಂದು ಸರಣಿ ಢಿಕ್ಕಿಯಾಗಿದ್ದು, ಕಾರು ಸಂಪೂರ್ಣ ಜಖಂಗೊಂಡ ಘಟನೆ ಪಡುಬಿದ್ರಿ ಸೇತುವೆ ಬಳಿ ನಡೆದಿದೆ. ಕಾರು ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ವಾಯುವೇಗದಲ್ಲಿ ಮುಂದೆ ಸಾಗಿ ತೆಂಗಿನ ಮರಕ್ಕೆ ಡಿಕ್ಕಿಯಾಗಿ ಅಲ್ಲಿಂದ ಹಿಮ್ಮುಖವಾಗಿ ಚಲಿಸಿ ಮತ್ತೊಂದು
ವಿಟ್ಲ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಹ ಸವಾರ ಇಮ್ರಾನ್ ಅಪಾಯದಿಂದ ಪಾರಾಗಿದ್ದಾರೆ. ಇವರು ವಿಟ್ಲ ಕಡೆಯಿಂದ ಕಂಬಳಬೆಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಕಡಬ :ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸುರತ್ಕಲ್ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಸರಣಿ ಅಪಘಾತಗಳು ನಡೆದಿದ್ದು, ಓರ್ವ ಬೈಕ್ ಸವಾರ ಮೃತಪಟ್ಟರೆ ಉಳಿದ ಅಪಘಾತಗಳಲ್ಲಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಕುಳಾಯಿಯ ಹೊನ್ನಕಟ್ಟೆ ಬಳಿ ಪಿಕಪ್ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಚಿತ್ರಾಪುರದ ಬಸ್ ನಿಲ್ದಾಣದ ಸಮೀಪದಲ್ಲಿ ಸ್ಕೂಟರೊಂದು ಸ್ಕಿಡ್ ಆಗಿದ್ದು, ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬೈಕಂಪಾಡಿ
ಉಳ್ಳಾಲ: ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ. ಶಿವಪ್ಪ ಅವರು ಕೂಲಿಕಾರ್ಮಿಕರಾಗಿದ್ದು, ಸಂಜೆ ನಂತರ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ವಾಚ್ ಮೆನ್ ವೃತ್ತಿ