Home Posts tagged #Acidity

ಆಸಿಡಿಟಿ (ಅತಿ ಆಮ್ಲತೆ)

ಆಸಿಡಿಟಿ ಅಥವಾ ಅತಿ ಆಮ್ಲತೆ ಎನ್ನುವುದು ಇಂದಿನ ಕಾಲದಲ್ಲಿ ಜಗತ್ತಿನಾದ್ಯಂತ ಎಲ್ಲರಲ್ಲೂ ಕಂಡು ಬರುವ ಬಹಳ ಸಾಮಾನ್ಯ ಸಮಸ್ಯೆಯಾಗಿದೆ. ಇಂದಿನ ಧಾವಂತದ, ವೇಗದ ಸ್ಪರ್ದಾತ್ಮಕ ಜಗತ್ತಿನಲ್ಲಿ ಎಲ್ಲವೂ ವೇಗವಾಗಿ ನಡೆಯುತ್ತದೆ. ಎಲ್ಲರೂ ತಮ್ಮ ಕೆಲಸದಲ್ಲಿ ಮಗ್ನರಾಗಿ ಕಾಲಕಾಲಕ್ಕೆ ಸರಿಯಾಗಿ ಆಹಾರ ಸೇವಿಸಲಾಗದ ಒತ್ತಡದ ಜೀವನ ಶೈಲಿಗೆ ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ.