ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ
ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದರಿಂದ ಪ್ರಪಂಚದಲ್ಲಿ ಚಳುವಳಿಗಳಿಗೆ ಜಯ ಯಾವತ್ತೂ ಸಿಗುತ್ತದೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದರು.ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮಸೂದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಡೀ ಭಾರತದ ದೇಶದಲ್ಲಿ ಎಲ್ಲಾ ಜನರು ಒಗ್ಗಟ್ಟಾಗಿ ಹೋರಾಟಕ್ಕೆ
ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು. ರೈತರ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಸೋಲಿನಿಂದ ಮೋದಿ ಸರ್ಕಾರ