ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಫಲಿತಾಂಶ : ಪುರುಷರ ವಿಭಾಗದಲ್ಲಿ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಜೂನ್ 12 ಮತ್ತು 13 ರಂದು ಸಂಜೆ 6.45 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ರಂಗಾಯಣ ಮೈಸೂರು ತಂಡದಿಂದ ಗೋರ್ ಮಾಟಿ ಎಂಬ ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬಂಜಾರ ಜನಾಂಗದ ಕಲೆ ಸಂಸ್ಕೃತಿ ಬದುಕು ಬವಣೆಗಳ ಸಂಕಥನಗಳಿಂದ ಕೂಡಿದ ಗೋರ್ ಮಾಟಿ ನಾಟಕವನ್ನು ಪ್ರಸಿದ್ಧ ರಂಗನಿರ್ದೇಶಕರಾದ ಸಿ.ಬಸವಲಿಂಗಯ್ಯ ನಿರ್ದೇಶಿಸಿದ್ದಾರೆ. ಈ
ಮೂಡುಬಿದಿರೆ: ನಾವು ಎಷ್ಟೇ ದೂರವಿದ್ದರೂ ಭಾಷೆ ಎಲ್ಲರನ್ನೂ, ಎಲ್ಲತನವನ್ನೂ ಒಗ್ಗೂಡಿಸುತ್ತದೆ. ಒಬ್ಬ ಜವಾಬ್ದಾರಿಯುತ ಪ್ರಜೆಯಾಗಿ ಎಲ್ಲವನ್ನೂ ಒಗ್ಗೂಡಿಸುವ ಕಾರ್ಯವನ್ನು ನಾವು ಮಾಡುವುದರ ಜೊತೆಗೆ ತುಳು ಭಾಷೆಯ ಆಸ್ತಿಯಾಗುವ ಕೆಲಸ ಮಾಡಬೇಕಾಗಿದೆ ಎಂದು ಅಂತರಾಷ್ಟ್ರೀಯ ಮೋಟಾರ್ ರೇಸರ್ ಮತ್ತು ಚಲನಚಿತ್ರ ನಟ ಅರವಿಂದ್ ಕೆ. ಪಿ ಹೇಳಿದರು. ಅವರು ಆಳ್ವಾಸ್ ಪದವಿ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಶನಿವಾರ ಆಯೋಜಿಸಿದ್ದ ಅಂತರ್ ಕಾಲೇಜು “ತುಳು
ಮೂಡುಬಿದಿರೆ : ಜೆಇಇ ಮೈನ್ಸ್ ಫೆಸ್-1 ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ – 97.1516355 ಹಾಗೂ ಗಣಿತ- 99.537079)
ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತು. ಡಾ.ಪ್ರಮೀಳ ಕೊಳಕೆ ಮತ್ತು ಪ್ರೊ.ಪ್ರಮೋದ್ ಕಾರಂತ್ ಅವರ ನೇತೃತ್ವದಲ್ಲಿ ಎಡಪದವು ಕಣ್ಣೂರಿ ಮಾಧವ ಗೌಡ ಮತ್ತು ವಾಮನ ಗೌಡ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳು ಸಂಘದ ಸದಸ್ಯರು ಬಹಳ
ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡುವವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ನರೇಗಾ ಯೋಜನೆಯ ಮಾದರಿಯನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿರುವುದು ಅತ್ಯಾಕರ್ಷಕವಾಗಿದೆ. ಟಿ.ವಿ. ಮೂಲಕ