ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್ ಎ ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್
ವಿದ್ಯಾಗಿರಿ: `ವಿದ್ಯಾರ್ಥಿ ಜೀವನ ಎಂದರೆ ಸ್ವರ್ಗ ಇದ್ದಂತೆ. ಇಲ್ಲಿ ಹಲವಾರು ಆಕರ್ಷಣೆಗಳಿದ್ದರೂ, ನೀವು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ರೆಡ್ ಕ್ರಾಸ್ ಘಟಕ ಮತ್ತು ಆಳ್ವಾಸ್ ಪುನರ್ಜನ್ಮದ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.