ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ
ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ 26ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು 11 ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ
ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು: ಡಾ.ಕುರಿಯನ್ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು. ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ ಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜು ದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾವು
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಆವರಣದಲ್ಲಿ ನಡೆದ 2024ನೇ ಸಾಲಿನ 2 ದಿನದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2468 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಅವಕಾಶ ನೀಡುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿದೆ ಈ ಬಾರಿಯ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಒಟ್ಟು 258 ಕಂಪನಿಗಳ ಪೈಕಿ 217 ಕಂಪನಿಗಳು 5953 ಜನರನ್ನು ಶಾರ್ಟ್ಲಿಸ್ಟ್ಗೊಳಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 1542
ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ವಿದ್ಯಾಗಿರಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ನಡೆಯಿತು. ಯುವ ವಾಹಿನಿ (ರಿ)
ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್‌ವೇವ್ ವೆಲಾಸಿಟಿ ಮೆಷರ್‌ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್ ಪಡೆದುಕೊಂಡಿದೆ.ಈ ಆವಿಷ್ಕಾರವು ಕೇವಲ ಆಘಾತ ತರಂಗಗಳ ವೇಗ ಮಾಪನ ಮಾತ್ರವಲ್ಲ, ವಿವಿಧ ಅನುಷ್ಠಾನಗಳು ಹಾಗೂ ಅಗ್ನಿ ಸಂಬಂಧಿತ ಹಾಗೂ ಬೆಳಕಿನ ತಂತ್ರಜ್ಞಾನದಲ್ಲಿ ವಿಶೇಷವಾಗಿ ಕ್ರಾಂತಿಕಾರಿ ಕೊಡುಗೆ