ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ.
ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ‍್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಮೂವರಲ್ಲಿ ಇವರು ಒಬ್ಬರಾಗಿದ್ದಾರೆ. ವಿಕಿಮೇಡಿಯಾ ಫೌಂಡೇಶನ್‌ನ ಆಹ್ವಾನಿತರಿಂದ ಯಕ್ಷಿತಾ ಭಾರತ ದೇಶದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ
ಮೂಡುಬಿದಿರೆ: ಕಳೆದ ಮೇ ತಿಂಗಳನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆದಿದ್ದಾರೆ.ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಾದ ಸಂತೋಷ ಎಂ. ದ್ವಿತೀಯ ರ‍್ಯಾಂಕ್, ತೇಜಸ್ ತೃತೀಯ ರ‍್ಯಾಂಕ್, ಮೋನಿಷಾ 8ನೇ ರ‍್ಯಾಂಕ್, ಕಿರಣ್
ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ